ಬೆಂಗಳೂರು: ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆಯಲ್ಲಿ ತಪ್ಪುಗಳು ಕಂಡು ಬಂದು ಸಾಕಷ್ಟು ಚರ್ಚೆಗೆ, ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ, ಈಗ ಎಸ್‍ಎಸ್‍ಎಲ್‍ಸಿ ಪ್ರಶ್ನೆಪತ್ರಿಕೆಯಲ್ಲೂ ತಪ್ಪುಗಳು ಕಂಡುಬಂದಿದೆ.
ಈ ಸಂಬಂಧ ಶಿಕ್ಷಕರು, ಪೋಷಕರು ಸಾರ್ವಜನಿಕ ಶಿಕ್ಷಣ ಇಲಾಖೆಗೆ ದೂರು ನೀಡಿದ್ದಾರೆ. ಕನ್ನಡ ಮಾಧ್ಯಮದ ಗಣಿತ ಪ್ರಶ್ನೆಪತ್ರಿಕೆಯಲ್ಲಿ ತಪ್ಪು ಪ್ರಶ್ನೆಗಳಿವೆ. ಈ ಬಗ್ಗೆ ವರದಿ ನೀಡುವಂತೆ ತಜ್ಞರಿಗೆ ಎಸ್‍ಎಸ್‍ಎಲ್‍ಸಿ ಬೋರ್ಡ್ ಸೂಚಿಸಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮದ್ ಮೊಹಸಿನ್, 4 ಅಂಕ ತಪ್ಪಾಗಿರುವ ಅಂಶ ಬೆಳಕಿಗೆ ಬಂದಿದೆ. ಹೀಗಾಗಿ, 4 ಗ್ರೇಸ್ ಅಂಕ ನೀಡಲು ಬೋರ್ಡ್ ತೀರ್ಮಾನ ಮಾಡಿದೆ. ಅಲ್ಲದೇ, ಪ್ರಿಂಟಿಂಗ್ ತಪ್ಪಿನಿಂದಾಗಿ ಇಂತಹ ತೊಂದರೆಯಾಗಿದೆ. ಪ್ರಶ್ನೆ ಪತ್ರಿಕೆ ತಯಾರಿಸಿರುವವರ ಮೇಲೆ ಶಿಸ್ತು ಕ್ರಮಕ್ಕೆ ವಿಚಾರಣೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

Source : publictv website